ಬೆಂಗಳೂರು: ಕೊರೋನಾ ಎರಡನೇ ಅಲೆ ಕಡಿಮೆಯಾದ ಹಿನ್ನಲೆಯಲ್ಲಿ ಈ ವರ್ಷದ ಶೈಕ್ಷಣಿಕ ವರ್ಷ ಆರಂಭಿಸುವ ಬಗ್ಗೆ ಸರ್ಕಾರ ತೀರ್ಮಾನ ನಡೆಸಲಿದೆ.
ಶಾಲೆ ಯಾವಾಗ ಆರಂಭಿಸಬೇಕು ಎಂಬ ಪ್ರಶ್ನೆಗೆ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಶಿಕ್ಷಣ ಸಚಿವರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಶಾಲೆ ಆರಂಭಿಸಬಹುದು ಎಂದು ತಜ್ಞರು ಶಿಫಾರಸ್ಸು ಮಾಡಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಈ ಸಂಬಂಧ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.