ಶಾಲೆಗಳನ್ನು ಬಂದ್ ಮಾಡಬೇಕು!

ಮಂಗಳವಾರ, 11 ಜನವರಿ 2022 (09:14 IST)
ಬಳ್ಳಾರಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಹೆಚ್ಚಾಗಿ ಮಕ್ಕಳನ್ನು ಕಾಡುತ್ತಿದೆ.
 
ಮೆಡಿಕಲ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ವಿಮ್ಸ್ ನಿರ್ದೇಶಕ ಗಂಗಾಧರ ಗೌಡ ಮಾಹಿತಿ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಕೊರೊನಾ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಮಂಡ್ಯದಲ್ಲಿ ನಾಗಮಂಗಲ ಶಾಸಕ ಸುರೇಶ್ ಗೌಡ, ಶಾಲೆಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ ತಕ್ಷಣವೇ ಶಾಲೆಗಳನ್ನು ಬಂದ್ ಮಾಡಿ. ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸುತ್ತಿದೆ.

ನನ್ನ ಕ್ಷೇತ್ರದ ಕಂಬದಹಳ್ಳಿಯ 20 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಸೋಂಕಿತ ಮಕ್ಕಳು ಮನೆಗೆ ಹೋದಾಗ ಪೋಷಕರಿಗೂ ಕೊರೊನಾ ಹರಡುತ್ತದೆ. 15 ವರ್ಷದೊಳಗಿನ ಮಕ್ಕಳ ಶಾಲೆಗಳನ್ನು ಬಂದ್ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಶಾಸಕ ಸುರೇಶ್‌ಗೌಡ ಒತ್ತಾಯ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ