ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆ ಆರಂಭಿಸುವ ಕುರಿತು ಇನ್ನೆರಡು ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ನಂತರ ಶಾಲೆಗಳನ್ನು ಆರಂಭಿಸಲಾಗುವುದು. ಎಲ್ಲಾ ಪೋಷಕರು ಮಕ್ಕಳನ್ನ ಶಾಲೆಗೆ ಕಳಿಸುತ್ತಾರೆ ಎಂ ವಿಶ್ವಾಸ ಇದೆ ಎಂದರು.
ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರ ವರದಿ ಆಧರಿಸಿ ಆಗಸ್ಟ್ 23ರಿಂದ ಶಾಲೆ ಪ್ರಾರಂಭಿಸಲಾಗುವುದು. 9 ರಿಂದ 12 ನೇ ತರಗತಿ ಆರಂಭಿಸಲು ತೀರ್ಮಾನಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವ ಕುರಿತು ನಿರ್ಧರಿಸುವ ಹಕ್ಕನ್ನು ಆಯಾ ಜಿಲ್ಲಾಡಳಿತಕ್ಕೆ ಬಿಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಶಾಲೆ ಆರಂಭ ಬಹುತೇಕ ಖಚಿತ. ವಿದ್ಯಾಗಮದ ಮೂಲಕವು ಶಿಕ್ಷಣ ಕೊಡಲಾಗುತ್ತೆ. ಮತ್ತೊಮ್ಮೆ ಇದೇ ವಿಷಯವಾಗಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.