ವಿಜ್ಞಾನ-ತಂತ್ರಜ್ಞಾನ ಇಲಾಖೆಯಿಂದಲೇ `ವಿಜ್ಞಾನ ದಿನ’ ಆಚರಣೆ: ಅಶ್ವತ್ಥನಾರಾಯಣ

ಶುಕ್ರವಾರ, 25 ಫೆಬ್ರವರಿ 2022 (20:20 IST)
ಬೆಂಗಳೂರು: ಮುಂದಿನ ವರ್ಷದಿಂದ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ರಾಜ್ಯದಾದ್ಯಂತ `ರಾಷ್ಟ್ರೀಯ ವಿಜ್ಞಾನ ದಿನ'ವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
 
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಶುಕ್ರವಾರ ಇಲ್ಲಿ ಏರ್ಪಡಿಸಿದ್ದ 29ನೇ ವರ್ಷದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ರಾಜ್ಯವು ಇಂದು ಗಳಿಸಿರುವ ಆರ್ಥಿಕ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಪಾತ್ರ ಅಗಾಧವಾಗಿದೆ ಎಂದರು.
 
ರಾಜ್ಯವು ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಮೊದಲಿನಿಂದಲೂ ದೇಶದಲ್ಲಿ ಮುಂಚೂಣಿಯಲ್ಲಿದೆ. ಇದಕ್ಕೆ ನೂರಾರು ವರ್ಷಗಳ ಹಿಂದೆಯೇ ರಾಜ್ಯದಲ್ಲಿ ಭದ್ರ ಬುನಾದಿ ಬಿದ್ದಿದೆ. ರಾಜ್ಯವು ಸಾಧಿಸಿರುವ ಸಾಮಾಜಿಕ ಸುಧಾರಣೆಗಳ ಹಿಂದೆಯೂ ತಂತ್ರಜ್ಞಾನದ ಕೊಡುಗೆ ಇದೆ ಎಂದು ಬಣ್ಣಿಸಿದರು.
 
ಬದುಕಿನ ಪ್ರತೀ ಸಮಸ್ಯೆಗೂ ವಿಜ್ಞಾನದಲ್ಲಿ ಪರಿಹಾರವಿದೆ. ಆದ್ದರಿಂದ ಮಕ್ಕಳಲ್ಲಿ ಪೂರ್ವ ಪ್ರಾಥಮಿಕ ಹಂತದಿಂದಲೇ ಗಣಿತ ಮತ್ತು ವಿಜ್ಞಾನಗಳ ಬಗ್ಗೆ ಒಲವು ಮೂಡಿಸಬೇಕು. ಈಗ ಮಾನವಿಕಗಳ ಕಲಿಕೆಯಲ್ಲೂ ತಂತ್ರಜ್ಞಾನ ನಿರ್ಣಾಯಕ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಏನನ್ನೇ ಕಲಿತರೂ ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಜೊತೆಗೆ, ವಿಜ್ಞಾನವು ನಮ್ಮ ಸಂಸ್ಕೃತಿ ಮತ್ತು ಧರ್ಮಗಳ ಭಾಗವಾಗಬೇಕು ಎಂದು ಸಚಿವರು ಸಲಹೆ ನೀಡಿದರು.
 
ಮಕ್ಕಳ ಕಲಿಕೆಯಲ್ಲಿ ಮೂರರಿಂದ ಹನ್ನೆರಡನೇ ವರ್ಷದವರೆಗೆ ನಿರ್ಣಾಯಕವಾಗಿದೆ. ಈ ಹಂತದ ಮಕ್ಕಳು ಶೇ.85ರಷ್ಟು ಕಲಿಕೆ ನಡೆಯುತ್ತಿದೆ. ಆದ್ದರಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಾಥಮಿಕ ಕಲಿಕೆಗೆ ಒತ್ತು ನೀಡಲಾಗಿದೆ ಎಂದು ಅಶ್ವತ್ಥನಾರಾಯಣ ನುಡಿದರು.
 
ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಪರಿಷತ್ತಿನ ಅಧ್ಯಕ್ಷ ಗಿರೀಶ್ ಕಡ್ಲೇವಾಡ, ಪ್ರದೇಶದ ಡಾ.ಅನುರಾಧ, ಕೆ.ವಿ.ಮಾಲಿನಿ, ಬಿ.ಎನ್. ಶ್ರೀನಾಥ್, ಶ್ರೀಮತಿ ಹರಿಪ್ರಸಾದ್ ಮುಂತಾದವರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ಬಾಲಕಿಗಳಿಗೆ ಪ್ರಶಸ್ತಿ ಪ್ರದಾನ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ