ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ರವರಿಂದ ಮತದಾರರ ಪಟ್ಟಿ ಪರಿಶೀಲನೆ

ಗುರುವಾರ, 15 ಡಿಸೆಂಬರ್ 2022 (21:41 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೇರ್ಪಡೆ ರದ್ದತಿ ಮತ್ತು ಮಾರ್ಪಾಡು ಮಾಡಲಾದ ಮತದಾರರ ಪಟ್ಟಿಯ ಮನೆ ಮನೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಅದರ ಭಾಗವಾಗಿ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಇಂದು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 7 ಮನೆಗಳಿಗೆ ಭೇಟಿ ನೀಡಿ ವಿಲೇವಾರಿ ಮಾಡಿರುವ ನಮೂನೆಗಳನ್ನು ಪರಿಶೀಲನೆ ನಡೆಸಿದರು.ಪರಿಶೀಲನೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ಆಯುಕ್ತರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ  ಸೇರ್ಪಡೆ, ರದ್ದತಿ ಮತ್ತು ಮಾರ್ಪಾಡು ಮಾಡಲಾದಂತಹ ನಮೂನೆಗಳನ್ನು  ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ 4 ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳ ಮೂಲಕ ಪರಿಶೀಲಿಸುವ ಕೆಲಸ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ