ಆರೋಪಿಯ ವಿರುದ್ಧ ಹಲವು ಪ್ರಕರಣಗಳು ಇದ್ದು ರೌಡಿ ಶೀಟ್ ಕೂಡ ಓಪನ್ ಮಾಡಲಾಗಿತ್ತು.ರಾತ್ರಿ ಆರೋಪಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ.ಕೊಲೆಯಾದ ವ್ಯಕ್ತಿಯ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗ್ತಿದೆ.ಹಳೇ ವೈಷಮ್ಯ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ಇದೆ.ಸದ್ಯ ಆರೋಪಿಗಳ ಹುಡುಕಾಟ ನಡೆಸಲಾಗ್ತಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್ ಟಿ ಹೇಳಿದ್ದಾರೆ.