ಕರ್ನಾಟಕದಲ್ಲಿ ಇಂದು ಎರಡನೇ ಹಂತದ ಮತದಾನ: ಎಲ್ಲೆಲ್ಲಿ ಚುನಾವಣೆ ನೋಡಿ

Krishnaveni K

ಮಂಗಳವಾರ, 7 ಮೇ 2024 (08:14 IST)
ಹುಬ್ಬಳ್ಳಿ: ಕರ್ನಾಟಕದಲ್ಲಿ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಯಾವೆಲ್ಲಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.

ಏಪ್ರಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆದಿತ್ತು. ಈ ವೇಳೆ ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಸೇರಿದಂತೆ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಇದೀಗ ಎರಡನೇ ಹಂತದ ಚುನಾವಣೆ ಇಂದು ನಡೆಯುತ್ತಿದೆ.

ಇಂದು ಕರ್ನಾಟಕದ ಉತ್ತರ ಭಾಗಗಳಾದ ಹುಬ್ಬಳ್ಳಿ, ಉತ್ತರ ಕನ್ನಡ, ಶಿರಸಿ, ಹಾವೇರಿ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಹಾವೇರಿ, ಕೊಪ್ಪಳ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಜೆ 6 ಗಂಟೆಯ ಒಳಗಾಗಿ ಮತಗಟ್ಟೆ ಬಂದವರಿಗೆ 6 ಗಂಟೆಯ ನಂತರವೂ ಮತದಾನಕ್ಕೆ ಅವಕಾಶ ನೀಡಲಾಗುವುದು. ಮೊದಲ ಹಂತದ ಚುನಾವಣೆಯಲ್ಲಿ ಕರ್ನಾಟಕದಲ್ಲಿ 69.56 ಶೇಕಡಾ ಮತದಾನ ನಡೆದಿತ್ತು. ಇದೀಗ ಎರಡನೇ ಹಂತದಲ್ಲಿ ಮತದಾರರ ಪ್ರತಿಕ್ರಿಯೆ ಹೇಗಿರುತ್ತದೆ ನೋಡಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ