ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ 200 ಮೀಟರ್ ನಿಷೇಧಾಜ್ಞೆ ಹೇರಲಾಗಿದೆ. ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್, ಸೈಬರ್ ಸೆಂಟರ್, ಕಂಪ್ಯೂಟರ್ ಸೆಂಟರ್ ಮುಚ್ಚಲು ಸೂಚಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಪ್ರಶ್ನೆ ಪತ್ರಿಕೆ ಲೀಕ್ ಮಾಡುವ, ಅಕ್ರಮ ಮಾಡುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಪ್ರಶ್ನೆ ಪತ್ರಿಕೆ ರವಾನೆ ಮಾಡೋದ್ರೀಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತೆರಳೋವರೆಗೂ ಕ್ಯಾಮೆರಾ ರೆಕಾರ್ಡ್ ಮಾಡಲಾಗುತ್ತಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧವಿದೆ.