ಇಂದಿನಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿದ್ದು,20 ದಿನಗಳ ಕಾಲ ನಡೆಯುವ ಮೌಲ್ಯಮಾಪನ ಕಾರ್ಯದಲ್ಲಿ 25 ಸಾವಿರ ಉಪನ್ಯಾಸಕರನ್ನು ನಿಯೋಜಿಸಲಾಗಿದೆ. ಒಟ್ಟಾರೆ 37 ವಿಷಯಗಳಲ್ಲಿ 7.27 ಲಕ್ಷ ವಿದ್ಯಾರ್ಥಿಗಳು ಬರೆದಿರುವ 45 ಲಕ್ಷ ಉತ್ತರ ಪತ್ರಿಕೆಗಳಿದ್ದು, ಮೌಲ್ಯಮಾಪನ ಮುಗಿಸಿ ಮೇ ಮೊದಲ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಉದ್ದೇಶವನ್ನು ಮಂಡಳಿ ಹೊಂದಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.