ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬುಧವಾರ, 8 ಮಾರ್ಚ್ 2023 (18:45 IST)
ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಮಾರ್ಚ್ 29ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಿದ್ಧತೆ ಬಗ್ಗೆ ವಿವರ ನೀಡಿದರು. 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು  ಇರಲಿವೆ. ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಈ ವ್ಯವಸ್ಥೆ ಮಾಡಿದ್ದೇವೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ 7,26,195 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 1109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲ್ಲೂಕು ಜಾಗೃತ ದಳ, 2,373 ವಿಷೇಷ ಜಾಗೃತ ದಳ ನಿಯೊಜನೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ