ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ, ಎಷ್ಟು ಹೊತ್ತಿಗೆ , ಎಲ್ಲಿ ನೋಡಬಹುದು, ಇಲ್ಲಿದೆ ಮಾಹಿತಿ

Sampriya

ಬುಧವಾರ, 8 ಏಪ್ರಿಲ್ 2026 (16:22 IST)
ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. 

ಈ ಮೊದಲು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಗ್ಗೆ ಮಾಹಿತಿ ನೀಡಿದ ಬಳಿಕ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. 

ಇಲಾಖೆ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ  ಮೊಬೈಲ್ ಆಪ್ ಮೂಲಕ ಫಲಿತಾಂಶ ಪಡೆಯಬಹುದು ಹಾಗೂ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ, ವಾಟ್ಸ್ಪ್, SಒS ಮೂಲಕವೂ ಫಲಿತಾಂಶ ರವಾನೆ ಆಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ