ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟದ್ದು
3 ಡಿಸಿಎಂ ಹುದ್ದೆ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ sಆರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು ಈ ಸಮಯದಲ್ಲಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ಅನಾವಶ್ಯಕ. ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅನಾವಶ್ಯಕ ಗೊಂದಲ ಸೃಷ್ಟಿಸುವುದು ಬೇಕಿಲ್ಲ. ಡಿಸಿಎಂ ಆಯ್ಕೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಯಾರೂ ಡಿಸಿಎಂ ವಿಚಾರವಾಗಿ ಮಾತನಾಡಬಾರದು ಎಂದು ಸೂಚಿನೆ ನೀಡಿದ್ದಾರೆ.