ಸೆಲ್ಫಿ ತಂದ ಆಪತ್ತು

ಸೋಮವಾರ, 14 ಮಾರ್ಚ್ 2022 (17:15 IST)
ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಜತೆ ಸೆಲ್ಫಿ ತೆಗೆಸಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನೊಳಗೆ ನಿಷೇಧಿತ ಪ್ರದೇಶಕ್ಕೆ ತೆರಳಿದ ನಾಲ್ವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
 
ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ 18 ವರ್ಷದೊಳಗಿನ ಬಾಲಕರು.
ಅರೋಪಿಗಳು ಸೇರಿ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ತಿಳಿಸಿದ್ದಾರೆ.
 
ಭಾರತ ಮತ್ತು ಶ್ರೀಲಂಕಾ ನಡುವೆ ಭಾನುವಾರ ಸಂಜೆ ಪಿಂಕ್ ಬಾಲ್ ಕ್ರಿಕೆಟ್ ಟೆಸ್ಟ್ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿತ್ತು. ಭಾನುವಾರ ರಾತ್ರಿ 7. 30 ರ ಸುಮಾರಿನಲ್ಲಿ ಕ್ರಿಕೆಟರ್ ಗಳಿಗೆ ಮೆಡಿಕಲ್ ವಿಶ್ರಾಂತಿ ನೀಡಲಾಗಿತ್ತು. ಈ ವೇಳೆ ವಿರಾಟ್ ಕೊಹ್ಲಿ ಮತ್ತಿತರರ ಆಟಗಾರರು ವಿಶ್ರಾಂತಿ ಪಡೆಯುತ್ತಿದ್ದರು. ವಿರಾಟ್ ಕೊಹ್ಲಿ ಬಳಿ ಸೆಲ್ಫಿ ಪಡೆಯಲು ಇಬ್ಬರು ಬಾಲಕರು ಸೇರಿ ನಾಲ್ವರು ನಿಷೇಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ. ಈ ವೇಳೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.
 
ಬಂಧಿತ ಆರೋಪಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ನಡೆಸಿದಾಗ ತಮ್ಮ ನೆಚ್ಚಿನ ಆಟಗಾರ ವಿರಾಟ್ ಕೊಯ್ಲಿ ಸೆಲ್ಫಿ ಪಡೆಯಲು ತೆರಳಿದ್ದಾಗಿ ತಿಳಿಸಿದ್ದಾರೆ. ಕಾನೂನುಸ ಸಂಘರ್ಷಕ್ಕೆ ಒಳಗಾದ ಇಬ್ಬರನ್ನು ಬಾಲ ಮಂದಿರಕ್ಕೆ ಒಪ್ಪಿಸಲಾಗಿದ್ದು, ಮತ್ತಿಬ್ಬರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ