ಉಭಯ ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಲು ಮನವಿ: ಎಂ.ಬಿ.ಪಾಟೀಲ

ಶುಕ್ರವಾರ, 30 ಸೆಪ್ಟಂಬರ್ 2016 (11:26 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದ್ದಾರೆ.
 
ನವದೆಹಲಿಯಲ್ಲಿ ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯದ ವಾಸ್ತವ ಸ್ಥಿತಿ ಕುರಿತು ನ್ಯಾಯಾಲಯದಲ್ಲಿ ಹೇಗೆ ವಾದಿಸಬೇಕು ಎನ್ನುವುದು ನಾರಿಮನ್ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.
 
ಒಂದು ಕಡೆ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಂಡ ಒಮ್ಮತದ ನಿರ್ಣಯ ಹಾಗೂ ಇನ್ನೊಂದಡೆ ಸುಪ್ರೀಂ ಆದೇಶವಿದೆ. ಆದರೆ, ರಾಜ್ಯದ ಜಲಾಶಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ಕರ್ನಾಟಕ ರಾಜ್ಯ ಸಂಕಷ್ಟದ ಸ್ಥಿತಿ ಎದುರಿಸುತ್ತಿದೆ. ಈ ಸಮಯದಲ್ಲಿ ನಾವು ನೀರನ್ನು ಉಳಿಸಿಕೊಳ್ಳಬೇಕಾಗಿದೆ.
 
ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ