ಗುಂಡಿನ ದಾಳಿ ನಡೆಸಿ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ

ಮಂಗಳವಾರ, 5 ಸೆಪ್ಟಂಬರ್ 2017 (21:02 IST)
ಹಿರಿಯ ಪತ್ರಕರ್ತೆ, ಸಾಹಿತಿಯಾಗಿದ್ದ ಗೌರಿ ಲಂಕೇಶ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆಗೈದ ಹೇಯ ಘಟನೆ ವರದಿಯಾಗಿದೆ. 
ನಗರದ ರಾಜ ರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್ ನಿವಾಸದ ಬಳಿ ಕೆಲ ದುಷ್ಕರ್ಮಿಗಳು ಫೈರಿಂಗ್ ನಡೆಸಿ ಗೌರಿ ಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
 
ಸುಭಾಷ್ ಪಾರ್ಕ್‌ ಬಳಿಯಿರುವ ನಿವಾಸದಕ್ಕೆ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮನೆಯ ಬಾಗಿಲು ಬಡಿದಿದ್ದಾರೆ. ಗೌರಿ ಲಂಕೇಶ್ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮನೆಯ ಹೊರಗಡೆ ಗೌರಿ ಲಂಕೇಶ್ ನಿಂತಿದ್ದಾಗ ಇಬ್ಬರು ದುಷ್ಕರ್ಮಿಗಳು ಅವರ ಎದೆ ಮತ್ತು ಹೃದಯ ಭಾಗದ ಮೇಲೆ ಮೂರು ಸುತ್ತಿನ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಗುಂಡಿನ ದಾಳಿ ನಡೆಯುತ್ತಿದ್ದಂತೆ ಗೌರಿ ಲಂಕೇಶ್ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ 
 
ಹಿರಿಯ ಸಾಹಿತಿ ಎಂ.ಎಂ.ಕಲಬುರಗಿ ಅವರನ್ನು ಹತ್ಯೆಗೈದ ಮಾದರಿಯಲ್ಲಿಯೇ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.   
 
ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದ ಗೌರಿ ಲಂಕೇಶ್, ಹಲವು ವಿವಾದಗಳಿಗೂ ಕಾರಣವಾಗಿದ್ದರು ಎನ್ನಲಾಗುತ್ತಿದೆ. 
 
ಪಶ್ಚಿಮ ವಿಭಾಗದ ಡಿಸಿಪಿ ಅನುಚೇತ್ ಗೌರಿ ಲಂಕೇಶ್ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಬಗ್ಗೆ ಆರ್‌ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ