ಇಂದು ಬೆಂಗಳೂರಿನಲ್ಲಿರುವ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ರಾಮಲಿಂಗಾ ರೆಡ್ಡಿ ಅವರು ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿಯ ಕುರಿತಾಗಿ ಮಾತುಕತೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಅನುದಾನ ಕಡಿತ ಮಾಡಿದ್ದರು. ಅನುದಾನ ಮರುಪರಿಶೀಲನೆ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ಇದರ ಹೊರತಾಗಿ ಸಿಎಂ ಜತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ ಅವರು, ರಾಜ್ಯ ಬಿಜೆಪಿಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ನೆರೆ, ಬರ ವೇಳೆ ರಾಜ್ಯಕ್ಕೆ ಕೇಂದ್ರ ಸಹಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.