ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ನಿಧನ

ಶನಿವಾರ, 11 ಜನವರಿ 2020 (10:17 IST)
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ  ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.



ಇವರಿಗೆ 88 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ 4 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆರ್.ಪಿಸಿ ಲೇಔಟ್ ನಲ್ಲಿರುವ ಅವರ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಾಳೆ ಅವರ ಅಂತ್ಯಕ್ರಿಯೆ ನೇರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಇವರಿಗೆ ರಾಜ್ಯೋತ್ಸವ ಸೇರಿ ಹಲವು ಪ್ರಶಸ್ತಿಗಳು ಲಭಿಸಿದ್ದು, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕೆಂದು ಹೋರಾಟ ಮಾಡಿದವರಲ್ಲಿ ಚಿಮೂ ಬಹುಪ್ರಮುಖ ಪಾತ್ರವಹಿಸಿದ್ದಾರೆ. ಹಾಗೇ ಹಂಪಿ ಸ್ಮಾರಕಗಳ ರಕ್ಷಣೆಗಾಗಿ ಅವರು ನಿರಂತರ ಹೋರಾಟ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ