ಪ್ರತ್ಯೇಕ ಧ್ವಜ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮೊಳಗಿದ್ಯಾಕೆ?
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹಾಗೂ ಪ್ರತ್ಯೇಕ ಧ್ವಜಾರೋಹಣಕ್ಕಾಗಿ ಸಿದ್ಧತೆ ಸದ್ದಿಲ್ಲದೇ ಆರಂಭಗೊಂಡಿದೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದ ವೇಳೆ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಕುರಿತು ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ಘೋಷಣೆ ಮಾಡಲಾಗಿದೆ. ಧ್ವಜಾರೋಹಣದಲ್ಲಿ ಉತ್ತರ ಕರ್ನಾಟಕದ 13 ಜಿಲ್ಲೆಗಳ ಹೋರಾಟಗಾರರು ಭಾಗಿಯಾಗಲಿದ್ದಾರೆ.
ಕಳೆದ ಜುಲೈ 31 ರಂದು ಸುವರ್ಣ ಸೌಧದ ಎದುರು ಪ್ರಮುಖ ಮಠಾಧೀಶರು ಧರಣಿ ಮಾಡಿದ್ದರು. ಉತ್ತರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು. ರಾಜ್ಯ ಸರ್ಕಾರ ರಚನೆಯಾಗಿ ಐದಾರು ತಿಂಗಳಾದರೂ ಉತ್ತರ ಕರ್ನಾಟಕ ಅಭಿವೃದ್ಧಿ ಹಿನ್ನೆಡೆ ಕಂಡಿದೆ ಎಂದು ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಹಾಗೂ ಧ್ವಜಾರೋಹಣ ನಡೆಸಲಾಗುತ್ತಿದೆ. ಇದಕ್ಕೆ 30 ಕ್ಕೂ ಹೆಚ್ಚು ವಿವಿಧ ಸಂಘಟನೆಗಳು ಬೆಂಬಲ ನೀಡಿವೆ.