ಪ್ರತ್ಯೇಕ ಲಿಂಗಾಯತ ಧರ್ಮ: ಸುಪ್ರೀಂ ಮೊರೆಗೆ ಚಿಂತನೆ

ಭಾನುವಾರ, 16 ಡಿಸೆಂಬರ್ 2018 (17:41 IST)
ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಚಿಂತನೆ ನಡೆಸಲಾಗಿದೆ.

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ನಿರಂತರ ಹೋರಾಟ ನಡೆಯಲಿದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಈ ಕುರಿತು ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ, ಈಗಾಗಲೇ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಿದೆ. ಇದು ಪ್ರಧಾನ ಮಂತ್ರಿ ಮೋದಿಯವರಿಗೂ ಗೊತ್ತಿಲ್ಲ. ಕೇಂದ್ರ ಸರ್ಕಾರದ ಧಾರ್ಮಿಕ ಖಾತೆ ಸಚಿವರು  ನಮಗೆ ಭರವಸೆ ನೀಡಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ತಿರಸ್ಕಾರದ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಸರ್ಕಾರ ಹೇಳಿದಂತೆ ನಡೆದುಕೊಳ್ಳದಿದ್ದರೆ ನಾವು ಬಜೆಟ್ ಅಧಿವೇಶನದಲ್ಲಿ ಮತ್ತೆ ಹೋರಾಟ ಮಾಡುತ್ತೇವೆ. ಜೈನರು ಸುಪ್ರೀಂ ಕೋರ್ಟ್ ಮೊರೆ ಹೋಗಿ ನ್ಯಾಯ ಪಡೆದುಕೊಂಡಂತೆ ನಾವು ಪಡೆದುಕೊಳ್ಳುತ್ತೇವೆ. ನಮ್ಮ ಹೋರಾಟ ನಿಲ್ಲಲ್ಲ. ಬದಲಿಗೆ ನಮ್ಮ ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಕೇಳುತ್ತೇವೆ. ಕೇಂದ್ರ ಸರ್ಕಾರ ಪ್ರತ್ಯೇಕ ಧರ್ಮದ ಬಗ್ಗೆ ರಾಜ್ಯ ಸರ್ಕಾರ‌ ಕಳುಹಿಸಿದ  ಪ್ರಸ್ತಾವನೆ ತಿರಸ್ಕರಿಸಿರುವ ಎರಡು ಕಾರಣವು ವಿಚಿತ್ರವಾಗಿವೆ. ಈ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದು ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ