ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟ: ಸಿಎಂ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು

ಬುಧವಾರ, 1 ಆಗಸ್ಟ್ 2018 (14:40 IST)
ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದ ಮಠಾದೀಶರ ಪ್ರತಿಭಟನೆಗೆ ಸ್ಪಂದಿಸಿದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನ ಮಠಾಧೀಶರು ಅಭಿನಂದಿಸಿದ್ದಾರೆ. 

ಹುಕ್ಕೇರಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಎಲ್ಲ ಮಠಾಧೀಶರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಹುಕ್ಕೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗದ ರೀತಿಯಲ್ಲಿ ನಾನು ನೋಡಿಕೊಳ್ಳುತ್ತೇನೆ ಅಲ್ಲದೆ ಹಲವು ಪ್ರಮುಖ ಇಲಾಖೆ ಕಛೇರಿಗಳನ್ನ ಇಲ್ಲಿಗೆ ಸ್ಥಳಾಂತರ ಮಾಡಲು ಸಿಎಂ ಸೂಚನೆ ನೀಡಿದ್ದಾರೆ. ಕೂಡಲೇ ಕಚೇರಿಗಳು ಸುವರ್ಣ ಸೌಧಕ್ಕೆ ಬರಲಿ ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ. 

ಇನ್ನು ರಾಜಮಾತೆ ಪ್ರಮೋದಾ ದೇವಿ ಯವರು ಉತ್ತರ ಕರ್ನಾಟಕದ ಅಭಿವೃದ್ಧಿ ಪಡಿಸುವಂತೆ ಮಾತನಾಡಿದ್ದು ನಮಗೆ ಖುಷಿ ತಂದಿದೆ ಎಂದಿರುವ ಸ್ವಾಮೀಜಿ ಅವರನ್ನು ಸಹ ಅಭಿನಂದಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ