ಬಾಣಂತಿಯರ ಸರಣಿ ಸಾವು ಪ್ರಕರಣ: ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತರ ದಿಢೀರ್‌ ದಾಳಿ

Sampriya

ಶನಿವಾರ, 7 ಡಿಸೆಂಬರ್ 2024 (14:07 IST)
Photo Courtesy X
ಬಳ್ಳಾರಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್‌ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ಪ್ರತ್ಯೇಕ ತಂಡವಾಗಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಆವರಣದ ವೆರ್ ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದೆ.  

ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಲೋಕಾಯುಕ್ತ ಪರಿಶೀಲನೆ ಮಾಡಿದೆ. ಐವಿ ಹಾಗೂ ಆರ್‌ಎಲ್ ಫ್ಲೂಯಿಡ್ ಔಷಧಿ ಬಂದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಐವಿ ದ್ರಾವಣ ಹಾಗೂ ಬಾಣಂತಿಯರ ಅಸ್ವಸ್ಥ ಆದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ರಿಯಾಕ್ಷನ್ ಆಗಿರುವ ಗ್ಲುಕೋಸ್, ಸೀಜ್ ಆಗಿರುವ 280 ಐವಿ ಫ್ಲೂಯಿಡ್ ಆರ್‌ಎಲ್ ಬಾಟಲ್ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ.  

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ