ಬಳ್ಳಾರಿಯಲ್ಲಿ ಬಾಣಂತಿಯ ಸರಣಿ ಸಾವು, ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ

Sampriya

ಶನಿವಾರ, 30 ನವೆಂಬರ್ 2024 (16:27 IST)
Photo Courtesy X
ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಆರ್‌ಎಲ್‍ಎಸ್ ಐವಿ ಗ್ಲೂಕೋಸ್ ಕಾರಣ ಎಂಬ ವರದಿ ಹೊರಬೀಳುತ್ತಿದ್ದ ಹಾಗೇ ಇದೀಗ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಹತ್ತಾರು ಬಾಕ್ಸ್‌ಗಳಲ್ಲಿ ಆರ್‌ಎಲ್‍ಎಸ್ ಐವಿ ಗ್ಲೂಕೋಸ್ ಪತ್ತೆಯಾಗಿದೆ. ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್‌ಗಳು ಇದಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಶೇಖರಿಸಿ ಇಟ್ಟಿದ್ದ ಬಾಕ್ಸ್‌ಗಳನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.

ಏಪ್ರಿಲ್ ತಿಂಗಳಿಂದ ಬೆಳಗಾವಿ ಜಿಲ್ಲೆಯಾದ್ಯಂತ ಆರ್‍ಎಲ್‍ಎಸ್ ಐವಿ ಗ್ಲೂಕೋಸ್ ಸರಬರಾಜಾಗಿದೆ. ಒಂದು ಗಂಟೆಗೂ ಹೆಚ್ಚಿನ ಸಮಯದಿಂದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ತನಿಖೆ ವೇಳೆ ಬೆಳಗಾವಿ ಜಿಲ್ಲಾದ್ಯಂತ ಕಳೆದ ಏಪ್ರಿಲ್ ತಿಂಗಳಿಂದಲೇ ಆರ್‌ಎಲ್‌ಎಸ್‌​ ಐವಿ ಗ್ಲುಕೋಸ್ ಪೂರೈಕೆಯಾಗಿದ್ದು, ಎಲ್ಲೆಲ್ಲಿ ಪೂರೈಕೆಯಾಗಿದೆ ಎಂಬ ಬಗ್ಗೆ ಉಗ್ರಾಣ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ