ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಏಳು ಬೀಳುಗಳು

ಮಂಗಳವಾರ, 14 ಮಾರ್ಚ್ 2023 (16:54 IST)
ದಕ್ಷಿಣ ಭಾರತದ ಇತರೇ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ರಾಜಕೀಯ ತುಂಬಾ ವಿಶಿಷ್ಟ ಮತ್ತು ಭಿನ್ನ. ದಕ್ಷಿಣ ಭಾಗದ ಬೇರೆ ರಾಜ್ಯಗಳಲ್ಲಿ ರಾಜಕೀಯವಾಗಿ ಪ್ರಾದೇಶಿಕ ಪಕ್ಷಗಳೇ ಪ್ರಮುಖ ಪಾತ್ರ ವಹಿಸುತ್ತವೆ.

ಕರ್ನಾಟಕದಲ್ಲಿ ಜೆಡಿಎಸ್, ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ಕೊಡುತ್ತಿದ್ದರೂ ಸ್ವತಂತ್ರವಾಗಿ ಸರ್ಕಾರ ರಚಿಸುವಷ್ಟು ಪ್ರಾಬಲ್ಯ ಹೊಂದಿಲ್ಲ. ಅಷ್ಟೇ ಅಲ್ಲ, ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಯಾವುದೇ ಒಂದು ಪಕ್ಷ ಬಹುಮತದೊಂದಿಗೆ ಸರ್ಕಾರ ರಚಿಸಿ ಐದು ವರ್ಷಗಳ ಕಾಲ ಸುದೀರ್ಘ ಆಡಳಿತ ನಡೆಸಿದ್ದು ವಿರಳ.

ನಾವು ಕರ್ನಾಟಕ ರಾಜಕೀಯ ಇತಿಹಾಸ ಗಮನಿಸಿದಾಗ ಹಲವು ಬಾರಿ ಅತಂತ್ರ ಪ್ರಜಾ ತೀರ್ಪು ಬಂದಿದೆ. ಈ ದೃಷ್ಟಿಕೋನದಲ್ಲಿ ದಕ್ಷಿಣ ಭಾರತದಲ್ಲಿ ಕರ್ನಾಟಕ ರಾಜಕೀಯ ಸ್ವಲ್ಪ ಭಿನ್ನವಾಗಿದೆ.

2004ರಿಂದ ಈವರೆಗೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಏನೇನು ರಾಜಕೀಯ ಬೆಳವಣಿಗೆಗಳಾಯಿತು ಎಂಬುದು ನಿಮಗೆ ಗೊತ್ತೆ? ಈ ಅವಧಿಯಲ್ಲಿ ಎರಡು ಬಾರಿ ಮಾತ್ರ ಒಂದೇ ಪಕ್ಷ ಪೂರ್ಣ ಅವಧಿ ಸರ್ಕಾರ ನಡೆಸಲು ಸಾಧ್ಯವಾಗಿದೆ. ಉಳಿದಂತೆ ಅತಂತ್ರ ಫಲಿತಾಂಶದ ಪರಿಣಾಮ ಸಮ್ಮಿಶ್ರ ಸರ್ಕಾರಗಳೇ ಅಸ್ತಿತ್ವಕ್ಕೆ ಬಂದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ