ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Sampriya

ಗುರುವಾರ, 12 ಜೂನ್ 2025 (16:34 IST)
Photo Courtesy X
ಬೆಂಗಳೂರು: ಎರಡು ವಾರ ಹಿಂದೆಯಷ್ಟೇ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರಿಗೆ ಎಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿತ್ತು. ಇದೀಗ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. 

ಹಲವು ಐಎಎಸ್ ಹಾಗೂ ಐಪಿಎಸ್‌ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದೇ ರೀತಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಇತರ ಕೆಲವು ಮಂದಿ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ.

ಡಿ. ರೂಪಾ ಮೌದ್ಗಿಲ್ ಅವರನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯು ಎಡಿಜಿಪಿ ಹುದ್ದೆಗೆ ಸಮನಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಶೆಟ್ಟೆನ್ನವರ್‌ ಎಸ್‌ಬಿ ಅವರನ್ನು ಕಾರ್ಮಿಕ ಇಲಾಖೆಯ  ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.  ಈ ಹುದ್ದೆ ನಿರ್ವಹಿಸುತ್ತಿದ್ದ ಡಾ.ಪ್ರಸಾದ್ ಎನ್‌ವಿ ಅವರನ್ನು ಬಿಡುಗಡೆ ಮಾಡಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ