ಹಾಸನ : ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಡಿ ಐವರನ್ನು ಬಂಧಿಸಲಾಗಿದೆ.
ಇದೇ ಮಾರ್ಚ್ 7ರಂದು ಘಟನೆ ನಡೆದಿದ್ದು, ಮರುದಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಪ್ರಕರಣ ಬೆಳಕಿಗೆ ಬಂದಿದೆ.
ಮಾ.7 ರಂದು ಸದರಿ ಹಾಸ್ಟೆಲ್ನಲ್ಲಿ ಸೌಲಭ್ಯ ಇಲ್ಲ ಎಂದು ಮಕ್ಕಳು ದಿಢೀರ್ ಪ್ರತಿಭಟನೆಗಿಳಿದಿದ್ದರು. ಈ ವೇಳೆ ಕೆಲವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಸಂಬಂಧ ಪ್ರಾಂಶುಪಾಲರಿಗೆ, ಶಿಕ್ಷಕರಿಗೆ ದೂರು ನೀಡಿದರೂ ಪ್ರಯೋಜನ ಆಗಿಲ್ಲ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದರು.
ಇದಾದ ಬಳಿಕ ವಿವಿಧ ಇಲಾಖೆಗಳನ್ನೊಳಗೊಂಡ ಅಧಿಕಾರಿಗಳ ತಂಡ ಹಾಸ್ಟೆಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ವೇಳೆ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದಾಗ 10ನೇ ತರಗತಿಯ ಮೂವರು, 7ನೇ ತರಗತಿಯ ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.