ಮತ್ತೇ ಜೈಲು ಸೇರಿದ ಮುರುಘಾ ಶಿವಮೂರ್ತಿ

Sampriya

ಸೋಮವಾರ, 29 ಏಪ್ರಿಲ್ 2024 (20:38 IST)
ಚಿತ್ರದುರ್ಗ: ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದಲ್ಲಿ ಫೋಕ್ಸೋ ಕಾಯ್ದೆಯಡಿ  ದಾಖಲಾದ ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಇಂದು ಮತ್ತೇ ಜೈಲು ಸೇರಿದ್ದಾರೆ.

ಸುಪ್ರೀಂಕೋರ್ಟ್‌ ಮುರುಘಾ ಮಠದ ಶಿವಮೂರ್ತಿ ಅವರಿಗೆ ಷರತ್ತು ಬದ್ಧ ಜಾಮೀನಿಗೆ ನಾಲ್ಕು ತಿಂಗಳು ತಡೆ ನೀಡಿ, ವಾರದೊಳಗೆ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಏ.22ರಂದು ಆದೇಶ ನೀಡಿತ್ತು.

ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿಗೆ ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ ಆದೇಶದಂತೆ ಮುರುಘಾ ಶ್ರೀ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಶರಣಾಗಿದ್ದಾರೆ. ಆರೋಪಿ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮೇ 27ಕ್ಕೆ ಮುಂದಿನ ವಿಚಾರಣೆ ನಿಗದಿಗೊಳಿಸಿ ಆದೇಶ ಹೊರಡಿಸಿದೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್‌ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
Photo Courtesy X


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ