ಲೈಂಗಿಕ ಕಿರುಕುಳ ಆರೋಪ: ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಬದಲಿಗೆ ಮಗನಿಗೆ ಟಿಕೆಟ್ ಸಾಧ್ಯತೆ

Sampriya

ಗುರುವಾರ, 2 ಮೇ 2024 (14:22 IST)
Photo Courtesy X
ಉತ್ತರಪ್ರದೇಶ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಬಿಜೆಪಿಯು ಇದೀಗ ಅವರ ಮಗ ಕರಣ್ ಭೂಷಣ್ ಸಿಂಗ್ ಅವರನ್ನು ಕ್ಷೇತ್ರದಿಂದ ಕಣಕ್ಕಿಳಿಸುವ ಲೆಕ್ಕಚಾರವನ್ನು ಹಾಕಿಕೊಂಡಿದೆ.

ಕರಣ್ ಪ್ರಸ್ತುತ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಈ ನಿರ್ಧಾರದ ಬಗ್ಗೆ ಬಿಜೆಪಿ ನಾಯಕತ್ವವು ಬ್ರಿಜ್ ಭೂಷಣ್ ಅವರಿಗೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಕೈಸರ್‌ಗಂಜ್‌ನ ಹಾಲಿ ಸಂಸದರಾಗಿದ್ದಾರೆ.  ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಡುವ ಸಾಧ್ಯತೆಯಿದೆ.

ಸುಮಾರು ಒಂದು ದಶಕದ ಕಾಲ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಅವರು ಆರು ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪವನ್ನು ಎದುರಿಸುತ್ತಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾರಿಂದ ಬೃಹತ್ ಪ್ರತಿಭಟನೆ ನಡೆಯಿತು.

2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಕೈಸರ್‌ಗಂಜ್‌ನಿಂದ ಎರಡು ಲಕ್ಷ ಮತಗಳಿಂದ ಗೆದ್ದರು. ಈ ಹಿಂದೆ ಕೈಸರ್‌ಗಂಜ್ ಕ್ಷೇತ್ರದಲ್ಲಿ ಬಿಜೆಪಿಗೆ ಸ್ಪರ್ಧೆ ಇಲ್ಲ ಎಂದು ಹೇಳಿದ್ದರು. ಕಳೆದ ಬಾರಿ 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದೆ, ಈ ಬಾರಿ 5 ಲಕ್ಷ ಮತಗಳನ್ನು ಕೊಡುವಂತೆ ಕಾರ್ಯಕರ್ತರು ಕರೆ ನೀಡಿದ್ದಾರೆ ಎಂದರು.

ಕಳೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರು ಬಿಎಸ್‌ಪಿಯ ಚಂದ್ರದೇವ್ ರಾಮ್ ಯಾದವ್ ಅವರನ್ನು 2.5 ಲಕ್ಷ ಮತಗಳಿಂದ ಸೋಲಿಸಿದ್ದರು. ಅವರು ಮೂರು ಬಾರಿ - 2009, 2014 ಮತ್ತು 2019 ರಲ್ಲಿ ಸ್ಥಾನವನ್ನು ಗೆದ್ದಿದ್ದಾರೆ. 2009 ರ ಮೊದಲು, ಸಮಾಜವಾದಿ ಪಕ್ಷದ ಬೇಣಿ ಪ್ರಸಾದ್ ವರ್ಮಾ ಅವರು 1996 ರಿಂದ 2009 ರವರೆಗೆ ಕೈಸರ್ಗಂಜ್ ಸ್ಥಾನವನ್ನು ಹೊಂದಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ