ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಅರೆಸ್ಟ್

ಭಾನುವಾರ, 30 ಜುಲೈ 2017 (15:26 IST)
ಶಾಲಾ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಶಾಲಾ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಫ್ರೆಜರ್ ಟೌನ್ ನಿವಾಸಿ 30 ವರ್ಷ ವಯಸ್ಸಿನ ಮೊಹಮ್ಮದ್ ಅಫ್ಜಲ್, ಆಕೆಯನ್ನು ಕಾರಿನಲ್ಲಿ ಹೊರಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗುತ್ತಿದ್ದ ಎಂದು ಮೂಲಗಳು ತಿಳಿಸಿವೆ.
 
ಆರೋಪಿಯ ಹೇಯ ವರ್ತನೆ ಬಗ್ಗೆ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಆರೋಪಿಯ ವಿರುದ್ಧ ಪುಲಕೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆಯಡಿ ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ