ವಿದ್ಯಾರ್ಥಿನಿಯೊಬ್ಬಳು ಗಂಡು-ಹೆಣ್ಣಿನ ಖಾಸಗಿ ಕ್ಷಣಗಳ ಸ್ಕೆಚ್ ಬರೆಯುವಂತೆ ಸಹಪಾಠಿಗೆ ಕಿರುಕುಳ ನೀಡುತ್ತಿದ್ದಳು. ಸಹಪಾಟಿಯ ಕಿರುಕುಳ ತಾಳಲಾರದೇ ಬಾಲಕಿ ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಈ ವಿಚಾರ ತಿಳಿದ ಬಾಲಕಿ ಪೋಷಕರು, ಒತ್ತಾಯ ಮಾಡ್ತಿದ್ದ ಬಾಲಕಿ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರ ಪೋಷಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಲ್ಲೆ ನಡೆದಿದೆ.
ನೊಂದ ಬಾಲಕಿಯ ಪೋಷಕರು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಐಪಿಸಿ 504, 323, ಹಾಗೂ 324 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.