ಕಚೇರಿಯಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ: ಡಿವೈಎಸ್‌ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

Sampriya

ಶನಿವಾರ, 4 ಜನವರಿ 2025 (18:26 IST)
ಮಧುಗಿರಿ: ದೂರು ನೀಡಲು ಬಂದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇದೀಗ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯ 14ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತಮ್ಮಕಚೇರಿಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪದಡಿಯಲ್ಲಿ ರಾಮಚಂದ್ರಪ ಅವರನ್ನು ಬಂಧಿಸಲಾಗಿತ್ತು. ಬಂಧನ ಹಿನ್ನೆಲೆಯಲ್ಲೇ ಅವರನ್ನು ಅಮಾನತು ಗೊಳಿಸಲಾಗಿದೆ.

ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರು ತನ್ನ ಕಚೇರಿಯಲ್ಲಿನ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು.

ಇದನ್ನು ಕಿಟಕಿಯ ಮೂಲಕ ವ್ಯಕ್ತಿಯೊಬ್ಬ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹರಿಯ ಬಿಟ್ಟಿದ್ದು ಇದೀಗ ವಿಡಿಯೋ ವೈರೆಲ್ ಆಗಿತ್ತು. ವಿಡಿಯೋ ವೈರಲ್ ಬೆನ್ನಲ್ಲೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ