ಕಾಲೇಜ್ ಲೆಕ್ಚರ್ ರಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ

ಮಂಗಳವಾರ, 20 ಜೂನ್ 2017 (10:54 IST)
ತುಮಕೂರು: ಫೇಲ್ ಮಾಡುವುದಾಗಿ ಬೆದರಿಸಿ ವಿದ್ಯಾರ್ಥಿನಿಯರಿಗೆ ತುಮಕೂರಿನ ಸರ್ಕಾರಿ ಕಾಲೇಜಿನ ಲೆಕ್ಚರ್ ಒಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಕಾಲೇಜಿನ ವಿದ್ಯಾರ್ಥಿನೀಯರೇ ಸ್ವತ: ದೂರು ನೀಡಿದ್ದಾರೆ. 
 
ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಹರೀಶ್ ವಿರುದ್ದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಕಾಲೇಜಿನ ವಿದ್ಯಾರ್ಥಿನೀಯರಿಗೆ ಮಾರ್ಕ್ಸ್ ಕಡಿಮೆ ಮಾಡುತ್ತೇನೆ ಹಾಗೂ ಫೇಲ್ ಮಾಡುತ್ತೇನೆ ಎಂದು ಹೆದರಿಸಿ ಕಳೆದ 8 ವರ್ಷಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಸಂತ್ರಸ್ಥ ಯುವತಿಯ ಪೋಷಕರು ಆರೋಪಿಸಿದ್ದಾರೆ.
 
ಜತೆಗೆ ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
 

ವೆಬ್ದುನಿಯಾವನ್ನು ಓದಿ