ಮಕ್ಕಳ ಮೈಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿರುವುದು ನೋವಿನ ಸಂಗತಿ: ಸಿದ್ದರಾಮಯ್ಯ

ಶನಿವಾರ, 14 ನವೆಂಬರ್ 2015 (17:26 IST)
ಇತ್ತೀಚೆಗೆ ಮಕ್ಕಳ ಮಕ್ಕಳ ಮೈಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರು ಮೃಗಗಳು. ಇಂತಹ ಮೃಗಗಳಿಗೆ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
 
ಮಕ್ಕಳ ದಿನಾಚರಣೆ ಅಂಗವಾಗಿ ಬಾಲಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಕ್ಕಳಿಗೆ ಸಮಾನತೆಯ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯುತ್ತಾರೆ ಎಂದರು.
 
ಮುಂಬರುವ ದಿನಗಳಲ್ಲಿ ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಸರಕಾರ ಹಮ್ಮಿಕೊಂಡಿದ್ದು,ಶೀಘ್ರದಲ್ಲಿ ಜಾರಿಗೆ ಬರಲಿವೆ. ಶಾಲೆಗಳಲ್ಲಿ ಮಕ್ಕಳಿಗೆ ಸುರಕ್ಷತೆ ಒದಗಿಸುವ ಬಗ್ಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
 

ವೆಬ್ದುನಿಯಾವನ್ನು ಓದಿ