ಸ್ವಾಮೀಜಿಗಳನ್ನು ರಾಜಕೀಯದಿಂದ ದೂರ ಇಡಬೇಕೆಂದ ಶಾಮನೂರು

ಶುಕ್ರವಾರ, 12 ಏಪ್ರಿಲ್ 2019 (20:42 IST)
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಮುಗಿದ ಅಧ್ಯಾಯವಾಗಿದೆ. ಲಿಂಗಾಯತ - ವೀರಶೈವ ಎಲ್ಲಾ ಒಂದೇ, ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹೀಗಂತ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕ್ರಪ್ಪ ಹೇಳಿದ್ದಾರೆ.

ಹೊಡೆದಾಟ , ಬಡೆದಾಟ ಏನಿದ್ರೂ ಸ್ವಾಮಿಗಳದ್ದೇ ನಡೆಯುತ್ತಿವೆ. ವೀರಶೈವ ಲಿಂಗಾಯತ ಜನರ ನಡುವೆ ಯಾವುದೇ ಭಿನ್ನಮತ ಇಲ್ಲ. ಸ್ವಾಮಿಗಳನ್ನು ರಾಜಕೀಯದಿಂದ ದೂರ ಇಟ್ರೆ ಎಲ್ಲಾ ಸರಿ ಹೋಗುತ್ತೆ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ವೀರಶೈವ-ಲಿಂಗಾಯತ ಸಮಾವೇಶ ಮಾಡ್ತಿದ್ದೇವೆ. ವೀರಶೈವ-ಲಿಂಗಾಯತ ಎರಡೂ ಒಂದೇ ಎಂಬ ನಿರ್ಣಯ ಕೈಗೊಳ್ಳದಿದ್ದಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕ್ತೇವೆ ಎಂದ ವೀರಶೈವ ಮಠಾಧೀಶರ ಹೇಳಿಕೆಗೆ ಶಿವಶಂಕರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಅವರು ಏನು ಪ್ಲಾನ್ ಮಾಡಿಕೊಂಡಿದ್ದಾರೋ ಗೊತ್ತಿಲ್ಲ.

ಆದ್ರೆ ನಾವೆಲ್ಲಾ ಒಂದಾಗಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಖಂಡಿತಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಸಿಗಲಿದೆ ಅಂತ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ