ಶರತ್ ಬಚ್ಚೇಗೌಡ ಬಿಜೆಪಿಯಿಂದ ಉಚ್ಛಾಟನೆ ; ಬಿಗ್ ನ್ಯೂಸ್

ಭಾನುವಾರ, 17 ನವೆಂಬರ್ 2019 (15:12 IST)
ರಾಜ್ಯ ರಾಜಕೀಯದಲ್ಲಿ ಉಪಚುನಾವಣೆ ಹೊತ್ತಲ್ಲಿ ಹೈಡ್ರಾಮಾ ನಡೆಯುತ್ತಿದೆ. ಬಂಡಾಯ ಅಭ್ಯರ್ಥಿಗಳು ಪಕ್ಷದ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆದಿರೋದು ಆಯಾ ಪಕ್ಷಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿಯಾಗಿರೋ ಎಂಟಿಬಿ ನಾಗರಾಜ್ ವಿರುದ್ಧ ಸ್ಪರ್ಧೆಗೆ ಅಣಿಯಾಗಿರೋ ಶರತ್ ಬಚ್ಚೇಗೌಡರನ್ನು ಬಿಜೆಪಿಯಿಂದ ಉಚ್ಛಾಟಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಗಂಭೀರ ಚಿಂತನೆ ನಡೆಸಿದ್ದಾರೆ.

ಎಷ್ಟೇ ಮನವೊಲಿಕೆ ಮಾಡಿದರೂ ಕಣದಿಂದ ಹಿಂದೆ ಸರಿಯೋ ಮಾತೇ ಇಲ್ಲ ಅಂತ ಶರತ್ ಬಚ್ಚೇಗೌಡ ಖಡಕ್ ಆಗಿ ಹೇಳಿರೋದು ಸಿಎಂ ಯಡಿಯೂರಪ್ಪಗೆ ನುಂಗಲಾರದ ತುತ್ತಾಗಿದೆ.

ಎಂಟಿಬಿ ಸೇರಿದಂತೆ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಲೇಬೇಕಾದ ಅನಿವಾರ್ಯತೆಗೆ ಯಡಿಯೂರಪ್ಪ ಸಿಲುಕಿದ್ದಾರೆ.

ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಪಕ್ಷದ ಮುಖಂಡರನ್ನು ಉಚ್ಛಾಟಿಸಲು ಮುಂದಾಗಿದ್ದಾರೆ.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ