ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಯಡಿಯೂರಪ್ಪ

ಶನಿವಾರ, 8 ಜುಲೈ 2017 (13:50 IST)
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಗ್ರಹಿಸಿದ್ದಾರೆ.
 
ನಾಲ್ಕು ವರ್ಷದಲ್ಲಿ ಸಂಘ ಪರಿವಾರದ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ರುದ್ರೇಶಿ , ಪ್ರಶಾಂತ್ ಪೂಜಾರಿ ಹತ್ಯೆಯ ನಂತರ ಇದೀಗ ಶರತ್ ಹತ್ಯೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಗುಡುಗಿದ್ದಾರೆ.
 
ಹಿಂದು ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮೌನವಾಗಿದ್ದಾರೆ. ಸರಕಾರ ಸಂಪೂರ್ಣವಾಗಿ ನಿಷ್ಕ್ರೀಯವಾಗಿದೆ. ಇದೊಂದು ಲಜ್ಜೆಗೆಟ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಶರತ್ ಮೇಲೆ ಇಷ್ಟು ದಿನವಾದ್ರೂ ಆರೋಪಿಗಳನ್ನು ಬಂಧಿಸಿಲ್ಲ, ಒಬ್ಬನೇ ಒಬ್ಬ ಆರೋಪಿಯನ್ನು ಕೂಡಾ ಬಂಧಿಸಲು ಪೊಲೀಸ್ ಇಲಾಖೆಗೆ ಸಾಧ್ಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ