ಖಾಸಗಿ ವೈದ್ಯರ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಹಣ ಹಂಚಿಕೆ

ಶುಕ್ರವಾರ, 17 ನವೆಂಬರ್ 2017 (16:41 IST)
ಖಾಸಗಿ ವೈದ್ಯರ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಆಸ್ಪತ್ರೆಯ ಸಿಬ್ಬಂದಿ ಹಣ ಹಂಚುತ್ತಿರುವ ದೃಶ್ಯ ಮಾಧ್ಯಮಗಳ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.
 
ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ ವಿರೋಧಿಸಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದ, ಮಹಿಳೆಯರಿಗೆ ಹಣ ಹಂಚುತ್ತಿರುವ ದೃಶ್ಯ ವೈರಲ್ ಆಗಿದೆ.  
 
ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ನಡೆದಿರುವ ವೈದ್ಯರ ಪ್ರತಿಭಟನೆಯಲ್ಲಿ, ಪಾಲ್ಗೊಂಡವರ ಹೆಸರುಗಳ ಪಟ್ಟಿ ಮಾಡಿ ಆಸ್ಪತ್ರೆಯ ಸಿಬ್ಬಂದಿ ಹಣ ನೀಡುತ್ತಿರುವುದು ಬಹಿರಂಗವಾಗಿದೆ. 
 
ಕೆಲ ಜಿಲ್ಲೆಗಳಲ್ಲಿ ಖಾಸಗಿ ವೈದ್ಯರ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಹಣ ನೀಡಲಾಗಿದೆ.ಇದೊಂದು ರಾಜಕೀಯ ಪ್ರೇರಿತ ಮುಷ್ಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ