ಜನರು ಡಿಸಿ ಕಚೇರಿಗೆ ಅನಗತ್ಯವಾಗಿ ಬರಲೇಬಾರದು ಎಂದು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ -19 ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸಾರ್ವಜನಿಕರು ಹೊರಗಡೆ ಸಂಚರಿಸುವುದುನ್ನು ನಿಷೇಧಿಸಲಾಗಿದೆ. ಆದರೆ ಸಣ್ಣಪುಟ್ಟ ಕಾರಣಕ್ಕೆ ಅನುಮತಿ ಪತ್ರ ಕೋರಿ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿದ್ದರೂ ಪ್ರತಿದಿನ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಸರ್ಕಾರದ ಅದೇಶದ ಉಲ್ಲಂಘನೆಯಾಗಿದೆ.
ಆದ್ದರಿಂದ ಸಾರ್ವಜನಿಕರು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಅನಾವಶ್ಯಕವಾಗಿ ಅನುಮತಿ ಪಡೆಯಲು ಏಪ್ರಿಲ್ 14 ರ ವರೆಗೆ ಬರುವುದನ್ನು ನಿಷೇಧಿಸಲಾಗಿದೆ. ತುರ್ತು ವೈದ್ಯಕೀಯ ಚಿಕಿತ್ಸೆ ನೆಲೆಯಲ್ಲಿ, ಬೇರೆ ಜಿಲ್ಲೆಯ ಆಸ್ಪತ್ರೆಗಳಿಗೆ ತೆರಳಲು, ವೈದ್ಯಕೀಯ ದೃಢಿಕೃತಪತ್ರದೊಂದಿಗೆ ಸಾರ್ವಜನಿಕರಿಗೆ ಅನುಮತಿ ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಹೊರತು ಬೇರೆ ಯಾವುದೇ ಅನುಮತಿಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.