ಅನುಪಮಾ ಶೆಣೈ ಅಧಿಕಾರದಲ್ಲಿ ಮುಂದುವರೆಯಲಿ: ಪೇಜಾವರ ಶ್ರೀಗಳು

ಗುರುವಾರ, 9 ಜೂನ್ 2016 (18:37 IST)
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಅಧಿಕಾರದಲ್ಲಿ ಮುಂದುವರೆಯಲಿ ಎಂಬುದು ನಮ್ಮ ಆಶಯ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಹೇಳಿದ್ದಾರೆ.
 
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು, ಅನುಪಮಾ ಶೆಣೈ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ. ರಾಜ್ಯಕ್ಕೆ ಇಂತ ದಕ್ಷ ಅಧಿಕಾರಿಗಳ ಅವಶ್ಯಕತೆ ಇದೆ. ಏನೇ ಸಮಸ್ಯೆಗಳಿದ್ದರು ಕೂಲಂಕುಶವಾಗಿ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಬೇಕಿತ್ತು. ಶೆಣೈ ಅವರು ಅಧಿಕಾರದಲ್ಲಿ ಮುಂದುವರೆಯಲಿ ಎಂದು ಹೇಳಿದ್ದಾರೆ.
 
ಬಾಹ್ಯ ಶಕ್ತಿಗಳ ಒತ್ತಡಕ್ಕೆ ಮಣಿದು ರಾಜ್ಯ ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹೇರಬಾರದು. ಏನೇ ವಿಷಯವಿದ್ದರು ಮುಕ್ತವಾಗಿ ಚರ್ಚೆ ನಡೆಸಬೇಕು. ಅನುಪಮಾ ಶೆಣೈ ಅವರ ರಾಜೀನಾಮೆ ವಿಚಾರದಲ್ಲಿ ಏನಾಗಿದೆ ಎಂದು ಸ್ವಷ್ಟವಾಗಿ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ