ಅನುಪಮಾ ಶೆಣೈ ರಾಜೀನಾಮೆಗೆ ಲಿಕ್ಕರ್ ಮಾಫಿಯಾ, ರಾಜಕೀಯ ಒತ್ತಡ ಕಾರಣ: ಕುಮಾರಸ್ವಾಮಿ

ಸೋಮವಾರ, 6 ಜೂನ್ 2016 (15:37 IST)
ಸಚಿವ ಪರಮೇಶ್ವರ್ ನಾಯ್ಕ ವಿರುದ್ಧ ದಿಟ್ಟತನ ತೋರಿ, ಗಟ್ಟಿತನದಿಂದ ಕರ್ತವ್ಯ ನಿರ್ವಹಿಸಿರುವ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆ ನೀಡಲು ಲಿಕ್ಕರ್ ಮಾಫಿಯಾ ಮತ್ತು ರಾಜಕೀಯ ಒತ್ತಡ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ಶೆಣೈ ಅವರಿಗೆ ಅಭಿನಂದನೆ ಸಲ್ಲಿಸಿರುವ ಎಚ್.ಡಿ.ಕುಮಾರಸ್ವಾಮಿ, ಲಿಕ್ಕರ್ ಮಾಫಿಯಾ ಮತ್ತು ರಾಜಕೀಯ ಒತ್ತಡದಿಂದ ಡಿವೈಎಸ್‌ಪಿ ರಾಜೀನಾಮೆ ನೀಡಬಾರದಿತ್ತು ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
 
ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ಗರಂ ಆಗಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಇದಕ್ಕೆ ರಾತೋರಾತ್ರಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದೆ ನಿದರ್ಶನ ಎಂದು ಹೇಳಿದ್ದಾರೆ.
 
ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ನೀಡದ ರಾಜ್ಯ ಸರಕಾರ ಲಜ್ಜೆಗೆಟ್ಟಿದೆ. ಈ ಸರಕಾರಕ್ಕೆ ಸ್ವಲ್ಪವು ಹೇಸಿಗೆ ಇಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಾಕರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ