ಡಿಸೆಂಬರ್ ಮೊದಲ ವಾರದಿಂದ ಶಿರಾಡಿ ಘಾಟ್ ಬಂದ್

ಭಾನುವಾರ, 6 ನವೆಂಬರ್ 2016 (08:46 IST)
ಬೆಂಗಳೂರು: ಮತ್ತೊಮ್ಮೆ ಶಿರಾಡಿ ಘಾಟಿಯಲ್ಲಿ ಸಾಗುವ ಸಾರ್ವಜನಿಕರ ಸಂಚಾರಕ್ಕೆ ತೊಡಕಾಗಲಿದೆ. ಕಾಂಕ್ರೀಟ್ ಕಾಮಗಾರಿ ನಡೆಸಲು ಡಿಸೆಂಬರ್ ಮೊದಲ ವಾರದಿಂದ ಈ ರಸ್ತೆಯಲ್ಲಿ ಪ್ರವೇಶ ನಿಷೇಧಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

13 ಕಿ.ಮೀ. ನಷ್ಟು ಉದ್ದದ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಯಲಿದ್ದು, ಇದಕ್ಕೆ ಬೇಕಾದ ತಯಾರಿ ಈಗಾಗಲೇ ಆರಂಭವಾಗಿದೆ. ಅಗತ್ಯ ವಸ್ತುಗಳನ್ನು ಶೇಖರಿಸಿಡಲಾಗಿದೆ. ಅರಣ್ಯ ಸಚಿವ ರಮಾನಾಥ ರೈ ಮತ್ತು ಮಹದೇವಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಅಧಿಕೃತವಾಗಿ ರಸ್ತೆ ಪ್ರವೇಶ ನಿರ್ಬಂಧದ ಕುರಿತು ಆದೇಶ ಹೊರಡಿಸಲಾಗುವುದು ಎಂದು ರಾಜ್ಯದ ಸಾರ್ವಜನಿಕ ಕಾಮಗಾರಿ ಇಲಾಖೆಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆಯೂ ಇದೇ ರೀತಿ ಕಾಂಕ್ರೀಟ್ ಕಾಮಗಾರಿಗಾಗಿ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಮತ್ತೊಮ್ಮೆ ಉಳಿದ ಭಾಗಗಳಿಗೆ ಕಾಮಗಾರಿ ನಡೆಯಲಿದೆ. ಅಧಿಕೃತವಾಗಿ ಆದೇಶ ಬಂದ ನಂತರ ಬದಲಿ ಮಾರ್ಗಗಳ ಘೋಷಣೆ ಮಾಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ