ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಸಾವಿನ ಬಗ್ಗೆ ಇದೀಗ ಸಂಶಯಗಳು ಹುಟ್ಟಿಕೊಂಡಿವೆ. ಕೇಮಾರು ವಿಠಲ ದಾಸ ಸ್ವಾಮೀಜಿ ಹಾಗೂ ಸಂತೋಷ್ ಭಾರತಿ ಗುರೂಜಿ ಅವರು ಶಿರೂರು ಶ್ರೀಗಳ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಗಳು ಸೇವಿಸಿದ ಆಹಾರದಲ್ಲಿ ವ್ಯತ್ಯಾಸವಾಗಿರುವುದರಿಂದ ಅವರ ಸಾವಾಗಿದೆಯೇ? ಅಥವಾ ಉದ್ದೇಶಪೂರ್ವಕವಾಗಿಯೇ ನಡೆದಿದ್ದಾ? ಎನ್ನುವ ಬಗ್ಗೆ ತನಿಖೆಯಾಗಬೇಕೆಂಬ ಒತ್ತಾಯ ಕೇಳಿ ಬಂದಿದೆ.