ಶಿವಕುಮಾರ್‌ಗೆ ರಿಯಲ್ ಎಸ್ಟೇಟ್ ಮೇಲೆ ಅಷ್ಟೇ ಆಸಕ್ತಿ: ವಿಜಯೇಂದ್ರ

Sampriya

ಗುರುವಾರ, 11 ಜುಲೈ 2024 (15:39 IST)
Photo Courtesy X
ಬೆಂಗಳೂರು: ಕರ್ನಾಟಕ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದರು ಮತ್ತು ಕರ್ನಾಟಕ ಸರ್ಕಾರವು ಈ ಬಗ್ಗೆ ಚಿಂತೆಯೇ ಮಾಡುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.

"ರಾಜ್ಯ ಸರ್ಕಾರವು ಸ್ವಲ್ಪವೂ ತಲೆಕೆಡಿಸಿಕೊಂಡಿಲ್ಲ, ಸಂಬಂಧಪಟ್ಟ ಸಚಿವರು ಸಹ ಬೆಂಗಳೂರಿನಲ್ಲಿ ಕುಳಿತು ರಾಜ್ಯ ಪ್ರವಾಸ ಮಾಡುತ್ತಿಲ್ಲ, ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಮತ್ತು ಸಾವುಗಳು ಹೆಚ್ಚಾಗುತ್ತಿವೆ. ನನ್ನ ಕ್ಷೇತ್ರದಲ್ಲಿ ಡೆಂಗೆಯಿಂದ ಒಂಬತ್ತು ತಿಂಗಳ ಮಗು ಸಾವನ್ನಪ್ಪಿದೆ, ಈ ವಿಷಯವನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸುತ್ತೇವೆ ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.

ಇನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅವರಿಗೆ ರಿಯಲ್ ಎಸ್ಟೇಟ್ ನಲ್ಲಿ ಮಾತ್ರ ಆಸಕ್ತಿ ಇದೆ.

''ಈಗಿನ ಕಾಂಗ್ರೆಸ್ ಸರಕಾರಕ್ಕೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಈಗ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಬಗ್ಗೆ ಉಪ ಸಿಎಂ ಡಿ.ಕೆ.ಶಿವಕುಮಾರ್ ಮಾತನಾಡುತ್ತಿದ್ದಾರೆ. ಈ ನಿರ್ಧಾರದ ಹಿಂದಿನ ಅಜೆಂಡಾ ಏನೆಂಬುದು ದೇವರೇ ಬಲ್ಲ. ಡಿಕೆ ಶಿವಕುಮಾರ್ ಅವರಿಗೆ ರಿಯಲ್ ಎಸ್ಟೇಟ್‌ನಲ್ಲಿ ಮಾತ್ರ ಆಸಕ್ತಿ ಇದೆ ಎಂಬುದು ಇಡೀ ಕರ್ನಾಟಕಕ್ಕೆ ಗೊತ್ತು, ಇದು ರಾಜಕೀಯ ಗಿಮಿಕ್ ಎಂದು ನಾನು ಭಾವಿಸುತ್ತೇನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ