ಹರತಾಳು ಹಾಲಪ್ಪ ವಿರುದ್ಧದ ರೇಪ್ ಕೇಸ್ ತೀರ್ಪು ಇಂದು ಪ್ರಕಟ

ಗುರುವಾರ, 17 ಆಗಸ್ಟ್ 2017 (10:45 IST)
ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧದ ಪ್ರಕರಣದ ತೀರ್ಪು ಇಂದು ಹೊರ ಬೀಳಲಿದೆ. ಆಗಸ್ಟ್ 8ರಂದು ವಿಚಾರಣೆ ಅಂತಿಮಗೊಳಿಸಿದ್ದ ಶಿವಮೊಗ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯ ಇವತ್ತಿಗೆ ತೀರ್ಪು ಕಾಯ್ದಿರಿಸಿತ್ತು. .7 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿರುವ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ.

ಮಾಜಿ ಸಚಿವ ಹರತಾಳು ಹಾಲಪ್ಪ ಅವರು ವಿನೋಬನಗರ ಕಲ್ಲಹಳ್ಳಿಯಲ್ಲಿರುವ ಮನೆಯಲ್ಲಿ ಸ್ನೇಹಿತ ವೆಂಕಟೇಶಮೂರ್ತಿಯವರ ಪತ್ನಿ ಮೇಲೆ 2009ನೇ ನವೆಂಬರ್ 26ರಂದು ಅತ್ಯಾಚಾರ ಎಸಗಿದ್ದರೆಂದು ಆರೋಪಿಸಲಾಗಿದ್ದು, ಪ್ರಕರಣ 2010ನೇ ಮೇ 2ರಂದು ಬೆಳಕಿಗೆ ಬಂದಿತ್ತು. ಹೀಗಾಗಿ, ಹಾಲಪ್ಪ ಅವರು ತಮ್ಮ ಸಚಿವಗಿರಿಗೆ ರಾಜೀನಾಮೆ ನೀಡಿದ್ದರು.

ಅತ್ಯಾಚಾರ ಆರೋಪ ಮಾಡಿದ್ದ ವೆಂಕಟೇಶಮೂರ್ತಿ ಪತ್ನಿ  ಬೆಂಗಳೂರಲ್ಲಿ ಪೊಲೀಸ್ ಮಹಾನಿರ್ದೇಶಕರು, ಶಿವಮೊಗ್ಗದ ವಿನೋಬನಗರ ಠಾಣೆಗೆ ದೂರು ನೀಡಿದ್ದರು. ರಾಜ್ಯಾದ್ಯಂತ ಪ್ರಕರಣ ಭಾರೀ ಸದ್ದು ಮಾಡಿತ್ತು. ಬಳಿಕ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕರಣವನ್ನ ಸಿಐಡಿ ತನಿಖೆಗೆ ಒಪ್ಪಿಸಿದ್ದರು. ಪ್ರಕರಣದ ಬಗ್ಗೆ ಮಾರ್ಚ್ 30, 2011ರಂದು ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿತ್ತು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ