ಚುನಾವಣೆ ಹೊತ್ತಿನಲ್ಲೇ ಶಿವಕುಮಾರ್ ಗೆ ಶಾಕ್

ಶನಿವಾರ, 22 ಏಪ್ರಿಲ್ 2023 (08:20 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ.
 
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ