ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ: ಜೆಡಿಎಸ್- ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ

ಮಂಗಳವಾರ, 28 ಫೆಬ್ರವರಿ 2017 (13:32 IST)
ನಗರಪಾಲಿಕೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ಅಧಿಕಾರದ ಗದ್ದುಗೆ ಏರಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಮೂರು ಬಾರಿಯ ಅಡಳಿತಾವಧಿ ಅಂತ್ಯಗೊಂಡಂತಾಗಿದೆ.  
 
ಕಳೆದ ಮೂರು ಅವಧಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರ ನಡೆಸಿದ್ದವು. ಇದೀಗ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮುರಿದುಕೊಂಡ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಂಚಿಕೊಂಡಿದೆ.
 
ಜೆಡಿಎಸ್ ಪಕ್ಷದ ಏಳುಮಲೈ ಬಾಬು ಪಾಲಿಕೆಯ 41 ಮತಗಳಲ್ಲಿ 25 ಮತಗಳನ್ನು ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದಾರೆ
ಉಪಮೇಯರ್ ಆಗಿ ಬಿಜೆಪಿಯ ರೂಪಾ ಲಕ್ಷ್ಮಣ್ ಆಯ್ಕೆಯಾಗಿದ್ದಾರೆ.
 
ಜೆಡಿಎಸ್, ಕಾಂಗ್ರೆಸ್ ಪಕ್ಷದ ಮೈತ್ರಿಯೊಂದಿಗೆ ಬಿಜೆಪಿಯನ್ನು ಮೂರು ಅವಧಿಗೆ ದೂರವಿಟ್ಟು ಅಧಿಕಾರ ನಡೆಸಿತ್ತು. ಇದೀಗ ಕಾಂಗ್ರೆಸ್ ಪಕ್ಷವನ್ನೇ ದೂರವಿಟ್ಟು ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಧಿಕಾರ ಅಸ್ತಿತ್ವಕ್ಕೆ ಬಂದಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ