ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: ಮ್ಯಾನೇಜರ್ ಶೋಭಾ ತಂದೆ ಬಸಪ್ಪ ಬಂಧನ

ಶುಕ್ರವಾರ, 1 ಆಗಸ್ಟ್ 2014 (14:07 IST)
ಡಿಸಿಸಿ ಬ್ಯಾಂಕ್‌ನಲ್ಲಿ 62 ಕೋಟಿ ರೂಪಾಯಿಗಳ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಶೋಬಾ ಅವರ ತಂದೆ ಬಸಪ್ಪನನ್ನು ಡಿಸಿಐಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಡಿಸಿಸಿ ಬ್ಯಾಂಕ್‌ ಮ್ಯಾನೇಜರ್ ಶೋಭಾ ಬ್ಯಾಂಕ್ ಹಣದಿಂದ ತಂದೆ ಬಸಪ್ಪ ಹೆಸರಿನಲ್ಲಿ ಆಸ್ತಿಯನ್ನು ಖರೀದಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿರುವುದರಿಂದ ಬಸಪ್ಪನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪ್ರಕರಣಕ್ಕೆ ಸಂಬಧಿಸಿದಂತೆ 17 ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದ್ದು, ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ