ಶಿವಸೇನೆಯವರಿಗೆ ಸಂವಿಧಾನ ಗೊತ್ತಿಲ್ಲ: ಸಿಎಂ ಲೇವಡಿ

ಗುರುವಾರ, 20 ಜುಲೈ 2017 (13:26 IST)
ಶಿವಸೇನೆಯವರಿಗೆ ಸಂವಿಧಾನ ಗೊತ್ತಿಲ್ಲ. ಹಿಂದಿನಿಂದಲೂ ಕರ್ನಾಟಕದ ನಾಡಧ್ವಜದ ಬಳಕೆಯಲ್ಲಿದೆ. ಆದರೆ ಮಾನ್ಯತೆ ದೊರೆತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ನಾವು ದೇಶಭಕ್ತರು ದೇಶದ ಏಕತೆ, ಸಮಗ್ರತೆ ಬಗ್ಗೆ ಅರಿವಿದೆ. ನಾಡಧ್ವಜಕ್ಕೆ ಮಾನ್ಯತೆ ನೀಡುವುದರಿಂದ ದೇಶದ ಗೌರವಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವರದಿ ನೀಡುವಂತೆ ಆದೇಶಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
 
ಕಾಶ್ಮಿರ ಕಣಿವೆಯಲ್ಲಿ ನಾಡಧ್ವಜಕ್ಕೆ ಮಾನ್ಯತೆ ನೀಡಿರುವುದರಿಂದ ನಮ್ಮ ರಾಜ್ಯದ ನಾಡಧ್ವಜಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ