ಕೀಳು ಪ್ರಚಾರಕ್ಕಾಗಿ ಶೋಭಾ ಕರಂದ್ಲಾಜೆ ಆರೋಪ: ಸಚಿವ ರೋಶನ್ ಬೇಗ್
ಶುಕ್ರವಾರ, 4 ನವೆಂಬರ್ 2016 (15:52 IST)
ರುದ್ರೇಶ್ ಹತ್ಯೆಯಲ್ಲಿ ತಮ್ಮ ಕೈವಾಡವಿದೆ ಎಂದು ಆರೋಪಿಸಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕೀಳು ರಾಜಕೀಯ ಮಾಡುತ್ತಿದ್ದಾರೆ. ಹತ್ಯೆಯಲ್ಲಿ ಯಾವುದೇ ರೀತಿಯ ತಮ್ಮ ಕೈವಾಡವಿಲ್ಲ ಎಂದು ಸಚಿವ ರೋಷನ್ ಬೇಗ್ ಹೇಳಿದ್ದಾರೆ.
ಶಿವಾಜಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ನನಗೆ ಎಲ್ಲಾ ಸಮುದಾಯದ ಜನರೊಂದಿಗೆ ಸಂಪರ್ಕವಿದೆ. ರುದ್ರೇಶ್ ಸಣ್ಣಮಟ್ಟದ ಆರೆಸ್ಸೆಸ್ ಕಾರ್ಯಕರ್ತನಾಗಿದ್ದ. ಆತನ ಹತ್ಯೆಯ ಹಿಂದಿರುವ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದರು.
ಸಿಬಿಐ, ಎನ್‌ಐಎ ಸೇರಿದಂತೆ ಯಾವುದೇ ಉನ್ನತ ಮಟ್ಟದ ರೀತಿಯ ತನಿಖೆಗೆ ಸಿದ್ದನಾಗಿದ್ದೇನೆ. ಶಿವಾಜಿ ನಗರದಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಸ್ಕೇಚ್ ಹಾಕಿರುವುದು ನಮಗೆ ಗೊತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಶೋಭಾ ಕರಂದ್ಲಾಜೆ ಕೇವಲ ಪೊಳ್ಳು ಪ್ರಚಾರಕ್ಕಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಶಿವಾಜಿ ನಗರ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಮತ್ತು ಹಿಂದೂ ಸಮುದಾಯ ಸಹೋದರತೆಯಿಂದ ಬಾಳುತ್ತಿದೆ. ಅದನ್ನು ಸಹಿಸಲು ಬಿಜೆಪಿ ಮುಖಂಡರಿಗೆ ಸಾಧ್ಯವಾಗುತ್ತಿಲ್ಲ ಎಂದು ಸಚಿವ ರೋಷನ್ ಬೇಗ್ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ