ಶೋಭಾ ಕರಂದ್ಲಾಜೆ ಬೇಜವಾಬ್ದಾರಿ ರಾಜಕಾರಣಿ: ವಿ.ಎಸ್.ಉಗ್ರಪ್ಪ

ಬುಧವಾರ, 19 ಜುಲೈ 2017 (12:13 IST)
ರಾಜ್ಯದಲ್ಲಿನ ಕೋಮುಘರ್ಷಣೆಯ ವೇಳೆ ಬಲಿಯಾದವರ ಪಟ್ಟಿಯಲ್ಲಿ ಬದುಕಿದ್ದವರನ್ನು ಸೇರಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಇಂತಹ ಕೆಲಸದಲ್ಲಿ ಪರಿಣಿತರು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ತಿರುಗೇಟು ನೀಡಿದ್ದಾರೆ.
 
ಗೃಹ ಸಚಿವರಿಗೆ ಕಳುಹಿಸಲಾದ ಬಲಿಯಾದವರ ಪಟ್ಟಿಯಲ್ಲಿ ಅನೇಕರು ಬದುಕುಳಿದಿದ್ದಾರೆ. ಇಂತಹ ವರ್ತನೆ ತೋರಿದ ಶೋಭಾ ಕರಂದ್ಲಾಜೆ ಬೇಜವಾಬ್ದಾರಿ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಹೆಚ್ಚಿನ ಜನರು ಕೋಮುಗಲಭೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಸಚಿವರಿಗೆ ತೋರಿಸಿ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯ ಸರಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸುವುದು ಬಿಜೆಪಿ ಉದ್ದೇಶವಾಗಿದೆ. ಗೃಹ ಸಚಿವರಿಗೆ ಸುಳ್ಳು ಮಾಹಿತಿ ನೀಡಿದ ಕರಂದ್ಲಾಜೆ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಸಂಸದೆ ಶೋಭಾ ಕರಂದ್ಲಾಜೆ ಮಾಡಿದ ಎಡವಟ್ಟು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರ ನಾಯಕರಿಗೆ ಮುಖಭಂಗವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ