ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅಧೋಗತಿ- ಶೋಭಾ ಕರಂದ್ಲಾಜೆ ಲೇವಡಿ

ಮಂಗಳವಾರ, 19 ಮಾರ್ಚ್ 2019 (06:32 IST)
ಉಡುಪಿ : ಚಿಕ್ಕಮಗಳೂರು ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟ ಹಿನ್ನಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರಿಗೆ ಲೇವಡಿ ಮಾಡಿದ್ದಾರೆ.


ಗೋವಾ ಸಿಎಂ ಮನೋಹರ ಪರಿಕ್ಕರ್ ಅವರಿಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು,’ ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಇಂದು ಅಧೋಗತಿ ಕಂಡಿದೆ. ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.


ಕ್ಷೇತ್ರ ಸಿಕ್ಕರೂ ಜೆಡಿಎಸ್ ಅಭ್ಯರ್ಥಿಗಳಿಗೆ ಹುಡುಕಾಟ ಮಾಡುತ್ತಿದೆ. ಕಾಂಗ್ರೆಸ್ ನಾಯಕರನ್ನು ಪಕ್ಷದತ್ತ ಸೆಳೆಯುತ್ತಿದೆ ಎಂಬ ಮಾಹಿತಿಯಿದೆ. ಈ ಎಲ್ಲಾ ಬೆಳವಣಿಗೆಯನ್ನು ಹೊರತು ಪಡಿಸಿಯೂ ಬಿಜೆಪಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ